ಬೆಳ್ತಂಗಡಿ: 2023-24ನೆಯ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗು ಪಿಯುಸಿ ಪರೀಕ್ಷೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಇಂದು ಜೂನ್ 09ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬೆಳ್ತಂಗಡಿಯ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಕಾಲೇಜಿನ ಸಂಸ್ಥಾಪಕ ಸುಮಂತ್ ಕುಮಾರ್ ಜೈನ್, ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಹಾಗು ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಜೈನ್ ಆಗಮಿಸಿದ್ದರು.
ವಿಧ್ಯಾರ್ಥಿಗಳಿಗೆ ಪುರಸ್ಕಾರ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅತಿಥಿಗಳು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು, ವಿದ್ಯಾರ್ಥಿಗಳ ಸಾಧನೆಗೆ ಕಾರಣಕರ್ತರಾದ ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನವನ್ನು ಸಹ ಶ್ಲಾಘನೆ ಮಾಡಿದರು.
ವ್ಯವಹಾರವನ್ನಷ್ಟೇ ಉದ್ದೇಶವಾಗಿಟ್ಟುಕೊಳ್ಳದೆ, ಸಾಮಾಜಿಕ ಕೆಲಸಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಚಟುವಟಿಕೆಗಳನ್ನು ನಡೆಸುವ ಉದ್ದೇಶ ಹೊಂದಿರುವ ಪಾರಸ್ ಪೃಥ್ವಿ ಜ್ಯುವೆಲ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಮತ್ತಷ್ಟು ಉತ್ಸಾಹದಿಂದ ಹೆಚ್ಚು ಸಾಧನೆ ಮಾಡಲು ಪ್ರೋತ್ಸಾಹ ನೀಡುತ್ತದೆ ಎಂಬ ಅಭಿಪ್ರಾಯಗಳನ್ನು ಹಂಚಿಕೊಂಡರು.