ಲಾಯಿಲ: ಸಿಂಧೂರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕರಾವಳಿ ಜಾನಪದ ಕಲಾ ತಂಡದಿಂದ ಬೀದಿ ನಾಟಕ

0

ಲಾಯಿಲ: ಸಿಂಧೂರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕರಾವಳಿ ಜಾನಪದ ಕಲಾ ತಂಡದಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು.

ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷ ಮಹೇಶ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕರಾವಳಿ ಜಾನಪದ ಕಲಾ ತಂಡದವರಿಂದ ನೀರು ಮತ್ತು ನೈರ್ಮಲ್ಯದ ಬಗ್ಗೆ ನೀರು ಅತ್ಯ ಅಮೂಲ್ಯ, ನೀರು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ, ಕುಡಿಯುವ ನೀರಿನ ಮಹತ್ವ ಮತ್ತು ಸದ್ಬಳಕೆ ಅಗತ್ಯ, ಪ್ರತಿಯೊಬ್ಬರೂ ನೆಲ-ಜಲ, ಅಂತರ್ಜಲ ಹೆಚ್ಚಳ ಮತ್ತು ಮಳೆನೀರು ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಉಳಿಕೆ ಮತ್ತು ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ.

ಭೂಮಿಯಲ್ಲಿ ಅಂತರ್ಜಲ ಕ್ಷೀಣಿಸಿದಂತೆ ದಿನೇ ದಿನೇ ನೀರಿನ ಸಮಸ್ಯೆ ಉಂಟಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ದಿಸೆಯಲ್ಲಿ ನೀರಿನ ಸಮಸ್ಯೆಯನ್ನು ಮನಗಂಡು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಲು ಜನರಲ್ಲಿ ಪ್ರಜ್ಞೆ ಮೂಡಬೇಕಾಗಿದೆ ಎಂದು ಬೀದಿನಾಟಕ ಪ್ರದರ್ಶನ ಮೂಲಕ ಜನರಿಗೆ ಅರಿವು ಮೂಡಿಸಿದರು.

ವಲಯದ ಮೇಲ್ಪೀಚಾರಕ ಸುಶಾಂತ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ರತ್ನಾವತಿ ಕಲಾತಂಡದವರು ಹಾಗೂ ಕೇಂದ್ರದ ಎಲ್ಲಾ ಸದಸ್ಯರು, ಊರಿನ ಸದಸ್ಯರು, ಸ್ವಸಹಾಯ ತಂಡದ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here