ಮೂಡುಕೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಕೋಡಿ ಒಕ್ಕೂಟದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಸಮಾರಂಭ ನಡ್ತಿಕಲ್ಲು ಶ್ರೀರಾಮ ಭಜನಾ ಮಂದಿರದ ಸಭಾ ಮಂದಿರದಲ್ಲಿ ಜೂ. 9ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ.ಎಸ್. ಇವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪೂಜ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಆಗಮಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಅತಿಥಿಗಳಾಗಿ ವಲಯದ ಜನಜಾಗೃತಿ ಅಧ್ಯಕ್ಷ ಮೋಹನ್ ಅಂಡಿಂಜೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಕಾಶ್ ಭಟ್, ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಯೋಜನಾಧಿಕಾರಿ ದಯಾನಂದ, ಪಂಚಾಯತ್ ಸದಸ್ಯರಾದ ವೀಣಾ ಮತ್ತು ಉಮೇಶ್ ನಡ್ತಿಕಲ್ಲು, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಪಿ.ಎಸ್., ಭಜನಾ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ, ನೂತನ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ ಮತ್ತು ನಳಿನಾಕ್ಷಿ, ನಿಕಟ ಪೂರ್ವ ಪದಾಧಿಕಾರಿಗಳು, ನೂತನ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ಸಂಘದ ಸದಸ್ಯರಾದ ಹಿರಿಯರನ್ನು ಗೌರವಿಸಲಾಯಿತು. ಉತ್ತಮ ತಂಡಗಳಿಗೆ ಅಡಿಕೆ ಸಸಿ ಕೊಟ್ಟು ಪ್ರೋತ್ಸಾಹಿಸಲಾಯಿತು.
ಸುನೀತಾ ಸೇವಾಪ್ರತಿನಿಧಿ ಸುನಿತಾ ಒಕ್ಕೂಟದ ವರದಿ ವಾಚಿಸಿ, ಮೇಲ್ವಿಚಾರಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿ, ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿಯವರು ಸ್ವಾಗತಿಸಿ, ಒಕ್ಕೂಟದ ಕಾರ್ಯದರ್ಶಿ ಗೀತಾ ವಂದಿಸಿದರು.