ಉಜಿರೆ: ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಚಿಣ್ಣರ ಕಲರವ

0

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯ ಕೆ.ಜಿ ವಿಭಾಗದ ಪ್ರಾರಂಭೋತ್ಸವವು ಜೂನ್ 03ರಂದು ಅನುಗ್ರಹ ಶಾಲೆಯ ಸಭಾಭವನದಲ್ಲಿ ನಡೆಯಿತು.ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ| ಫಾ.ಅಬೆಲ್ ಲೋಬೊರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅನುಗ್ರಹ ಕಾಲೇಜಿನ ಪ್ರಾಂಶುಪಾಲ ರೆ| ಫಾ.ವಿಜಯ್ ಲೋಬೋರವರು , ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್ ಹಾಗೂ ಕೆ.ಜಿ ವಿಭಾಗದ ಶಿಕ್ಷಕಿ ಗ್ರೇಸಿ ಸಲ್ಡಾನರವರು ಉಪಸ್ಥಿತರಿದ್ದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರೆ| ಫಾ. ಅಬೆಲ್ ಲೋಬೋರವರು ಅನುಗ್ರಹ ಸಂಸ್ಥೆಯು ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾಗಿದ್ದು ಗುಣಮಟ್ಟದ ಶಿಕ್ಷಕಿಯರಿಂದಾಗಿ ಪರಿಸರದಲ್ಲಿ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳು ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆದು ಆದರ್ಶ ವ್ಯಕ್ತಿಗಳಾಗಿ ಹೊರಹೊಮ್ಮುವಂತಾಗಲಿ ಎಂದು ಶುಭ ಹಾರೈಸಿದರು.

ಅನುಗ್ರಹ ಕಾಲೇಜಿನ ಪ್ರಾಂಶುಪಾಲರಾದ ರೆ| ಫಾ.ವಿಜಯ್ ಲೋಬೋರವರು ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ನೀಡುತ್ತಿರುವ ಶಿಕ್ಷಣದ ಗುಣಮಟ್ಟದಿಂದ ಈ ವರ್ಷ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ನಮ್ಮ ಶಾಲೆಗೆ ಸೇರ್ಪಡೆಯಾಗಿದ್ದಾರೆ. ನಮ್ಮ ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಭೋಧನೆ ಮಾಡುವ ಶಿಕ್ಷಕ / ಶಿಕ್ಷಕಿಯರಿದ್ದು ಪೋಷಕರು ಯಾವುದೇ ರೀತಿಯ ಅಂಜಿಕೆ ಇಲ್ಲದೆ ತಮ್ಮ ಮಕ್ಕಳನ್ನು ನಮ್ಮ ಸಂಸ್ಥೆಗೆ ಸೇರಿಸಬಹುದು ಎಂದು ತಿಳಿಸಿದರು.

ಒಂದನೇ ತರಗತಿಯ ವಿದ್ಯಾರ್ಥಿಗಳು ಅಭಿನಯ ಗೀತೆಯನ್ನು ಹಾಡಿದರು. ರೇಶ್ಮಾ ಡಿಸೋಜ ಸ್ವಾಗತಿಸಿ, ಗೀತಾರವರು ವಂದಿಸಿ, ವಿನ್ನಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here