Site icon Suddi Belthangady

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ.ಫಾ.ಕ್ಲಿಫರ್ಡ್ ಪಿಂಟೋರವರ ಜನ್ಮದಿನ ಆಚರಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯ ವಂ.ಫಾ.ಕ್ಲಿಫರ್ಡ್ ಪಿಂಟೋರವರ ಜನುಮ ದಿನವನ್ನು ಜೂನ್ 11ರಂದು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಸಂಚಾಲಕ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿ ಸರ್ವರನ್ನು ಆಶೀರ್ವದಿಸಿದರು.

ಶಿಕ್ಷಕಿಯರು ಹುಟ್ಟು ಹಬ್ಬಕ್ಕೆ ಶುಭಾಶಯ ಗೀತೆಗಳನ್ನು ಹಾಡಿದರು. ಸಹಶಿಕ್ಷಕಿ ಬ್ಲೆಂಡಿನ್ ರೊಡ್ರಿಗಸ್ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ವಿದ್ಯಾರ್ಥಿಗಳು ಹಾಡು, ನೃತ್ಯಗಳ ಮೂಲಕ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯ ವಂ ಫಾ ಕ್ಲಿಫರ್ಡ್ ಪಿಂಟೋರವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿ ಖುಷಿ ಪಡಿಸಿದ ಸರ್ವರನ್ನು ವಂದಿಸಿದರು. ಸಹಶಿಕ್ಷಕಿ ಲೋನ ಲೋಬೋ ಕಾರ್ಯಕ್ರಮ ನಿರ್ವಹಿಸಿದರು.

Exit mobile version