ಉಜಿರೆ ಶ್ರೀ.ಧ.ಮ.ಅ.ಹಿ.ಪ್ರಾ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ

0

ಉಜಿರೆ: ಆಯುಷ್ ಮಂತ್ರಾಲಯ ಭಾರತ ಸರ್ಕಾರ ನವದೆಹಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂ.10ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಯೋಗ ತರಬೇತಿ ಶಿಬಿರ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಯೋಗ ಪ್ರಾಧ್ಯಾಪಕ ಉದಯ್ ಸುಬ್ರಮಣ್ಯ ಅವರು ಉದ್ಘಾಟನೆ ನೆರವೇರಿಸಿದರು. ಪ್ರಶಿಕ್ಷಣಾರ್ಥಿಗಳಾದ ದಿವ್ಯ ಮತ್ತು ರಕ್ಷಿತಾ ಯೋಗ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯಕ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಶಿಕ್ಷಕಿ ರೇವತಿ ಸ್ವಾಗತಿಸಿದರು. ಗಿರೀಶ್ ವಂದಿಸಿದರು.ಕೂಸಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here