Site icon Suddi Belthangady

ಬದನಾಜೆ: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ರಚನೆ

ಬದನಾಜೆ: ಬದನಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ರಚನೆಯನ್ನು ಜೂ.06ರಂದು ನಡೆಸಲಾಯಿತು.

ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಸಹ ಶಿಕ್ಷಕರ ಸಹಕಾರದೊಂದಿಗೆ ವಿದ್ಯಾರ್ಥಿಗಳ ನಾಯಕ ಹಾಗೂ ನಾಯಕಿ ಆಯ್ಕೆಯನ್ನು ಮತದಾನದ ಮೂಲಕ ಆಯ್ಕೆ ಮಾಡಲಾಯಿತು.

ಮತದಾನದ ಪ್ರಕ್ರಿಯೆಯಲ್ಲಿ 4ನೇ ತರಗತಿ ವಿದ್ಯಾರ್ಥಿಗಳಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದರು.

ಶಾಲಾ ನಾಯಕನಾಗಿ ವಿದ್ಯಾರ್ಥಿ ಚಿರಾಗ್ 7ನೇ ತರಗತಿ ಹಾಗೂ ಶಾಲಾ ನಾಯಕಿಯಾಗಿ ವಿದ್ಯಾರ್ಥಿನಿ ಸಾಕ್ಷ 6ನೇ ತರಗತಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಎಸ್.ಡಿ.ಎಂ.ಸಿ ಸಮಿತಿ ಹಾಗೂ ಎಲ್ಲಾ ಸಹ ಶಿಕ್ಷಕರು ಉಪಸ್ಥಿತರಿದ್ದರು.

Exit mobile version