


ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತೋಡಿ ಪೆರ್ಲದಲ್ಲಿ ಗೆಳೆಯರ ಬಳಗ ವತಿಯಿಂದ ಉಚಿತ ನೋಟ್ ಪುಸ್ತಕ ಮಕ್ಕಳಿಗೆ ವಿತರಣೆ ಮಾಡಿದರು.

ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅದ್ಯಕ್ಷ ರಕ್ಷಿತ್ ಶಿವರಾಮ್ ಅಥಿತಿಯಾಗಿ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ರೇವತಿ, ಉಪಾಧ್ಯಕ್ಷ ದೇವರಾಜ್, ಉದ್ಯಮಿ ಚೇತನ್ ಗೌಡ, ಗೆಳೆಯರ ಬಳಗದ ಕಾರ್ಯದರ್ಶಿ ಸುರೇಶ್, ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಸೇವಂತಿ ಬಿ., ಸ್ವಾಗತಿಸಿ, ವೆಂಕಪ್ಪ ವಂದಿಸಿದರು.









