ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

0

ಪುದುವೆಟ್ಟು: ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.12ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸೇರಿಕೊಂಡು ಪುದುವೆಟ್ಟು ಪರಿಸರದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಘೋಷಣೆಗಳನ್ನು ಕೂಗುತ್ತ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಹೋಟೆಲ್ ಇನ್ನಿತರ ಕಡೆಗಳಲ್ಲಿ ಕೆಲಸ ಕಾರ್ಯಗಳನ್ನು ಮಾಡುವಂಥದ್ದು ಅಪರಾಧ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚು ಒತ್ತು ಕೊಟ್ಟು ಉತ್ತಮ ಪ್ರಜೆಗಳಾಗಬೇಕು ತಿಳಿಸಿದರು.

LEAVE A REPLY

Please enter your comment!
Please enter your name here