


ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಬಂಟ್ವಾಳ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಸಹಯೋಗದೊಂದಿಗೆ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು, ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಮತ್ತು ಜೂನಿಯರ್ ರೆಡ್ ಕ್ರಾಸ್ ಘಟಕ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಕಿಶೋರಿಯರ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ (ಆರ್.ಕೆ.ಎಸ್ ) ಹದಿಹರೆಯದ ಸ್ನೇಹಿ ಆರೋಗ್ಯ ಕೇಂದ್ರ ಎಂಬ ಯೋಜನೆಯ ಮೂಲಕ ಹೆಣ್ಣುಮಕ್ಕಳಿಗಾಗಿ ಮಾಹಿತಿ ಕಾರ್ಯಗಾರವನ್ನು ಜೂ 12ರಂದು ಹಮ್ಮಿಕೊಳ್ಳಲಾಯಿತು.
ತಾಲೂಕು ಸಾರ್ವಜನಿಕ ಆಸ್ಪತ್ರೆ ಬಂಟ್ವಾಳ ಇಲ್ಲಿನ ಆಪ್ತ ಸಮಾಲೋಚಕಿ ಅಕ್ಷತಾ ಇವರು ಆಗಮಿಸಿ ಹದಿಹರೆಯದ ಹೆಣ್ಣುಮಕ್ಕಳಿಗೆ ದೈಹಿಕ ಬೆಳವಣಿಗೆಯ ಹಂತಗಳು, ದೈಹಿಕ ಶುಚಿತ್ವ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಸವಿವರವಾಗಿ ಮಾಹಿತಿಯನ್ನು ನೀಡಿದರು.


ಪದವಿಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ.ಎನ್ ,ಹಾಗೂ ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಹಾಗೂ ದೈಹಿಕ ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ ಸ್ವಾಗತಿಸಿ, ನಿರೂಪಿಸಿದರು.


            






