ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜ್ವರದ ಕುರಿತಾದ ಮಾಹಿತಿಯನ್ನು ಆರೋಗ್ಯ ಇಲಾಖೆಯ ವಿನುತಾರವರು ಜೂ.05ರಂದು ನೀಡಿದರು.
ಡೆಂಗ್ಯೂ ಜ್ವರ ಬರಲು ಕಾರಣದ ಬಗ್ಗೆ ತಿಳಿಸುತ್ತಾ ನಮ್ಮ ಸುತ್ತ ಮುತ್ತಲ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನೀರು ನಿಂತ ಪ್ರದೇಶದಲ್ಲಿ ಸೊಳ್ಳೆಗಳ ಉತ್ಪತ್ತಿಯಾಗಿ ತೊಂದರೆಯಾಗುವ ಬಗ್ಗೆ ಮಾಹಿತಿ ನೀಡಿದರು.ಅದಕ್ಕೆ ಮಾಡಬೇಕಾದ ಪರಿಹಾರ ಕ್ರಮಗಳನ್ನು ತಿಳಿಸಿಕೊಟ್ಟರು.
ಮುಖ್ಯ ಶಿಕ್ಷಕಿ ಶಾಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮವನ್ನು ಶರತ್ ಕುಮಾರ್ ಇವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಪುಟ್ಟಮ್ಮ, ಸುನಿತಾ, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.