ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಅಂಕ ಪಡೆದ ಮುಸ್ಕಾನ್ ಕೌಸರ್ ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

0

ಬೆಳ್ತಂಗಡಿ: ಬೆಂಗಳೂರಿನ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ರವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ಜಿ ಎ ಬಾವ, ಸೈಯದ್ ಬ್ಯಾರಿ, ಮುಹಮ್ಮದ್ ಟಿ.ಕೆ. ಬ್ಯಾರಿ, ಸೌಹಾರ್ದ ಭವನದ ಆಡಳಿತಾಧಿಕಾರಿ ಅತ್ತೂರು ಚಾಯಬ್ಬ, ಪತ್ರಕರ್ತ ಬಿ.ಎಂ.ಹನೀಫ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here