ಉಜಿರೆ: ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬ ಆಚರಣೆ

0

ಉಜಿರೆ: ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ನಡೆಯಿತು.

ದಯಾಳ್‌ಬಾಗ್ ಕಪುಚಿನ್ ಸೇವಾಕೇಂದ್ರದ ವಂ.ಫಾ.ಜೋಯೆಲ್ ಲೋಪಸ್ ರವರ ನೇತೃತ್ವದಲ್ಲಿ ನಡೆದ ಬಲಿಪೂಜೆಯ ಪ್ರಭೋಧನೆಯಲ್ಲಿ ಸಂತ ಅಂತೋಣಿಯವರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ನೈತಿಕ ಉಪದೇಶವನ್ನು ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ವಂ.ಫಾ.ಅಬೆಲ್ ಲೋಬೊರವರು ಹಬ್ಬದ ಶುಭಾಶಯ ನೀಡಿದರು.

ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಜರುಗಿದವು. ಮಕ್ಕಳಿಗೆ ಸಿಹಿಯನ್ನು ಹಂಚಲಾಯಿತು.

LEAVE A REPLY

Please enter your comment!
Please enter your name here