ವೇಣೂರು: ನಿಟ್ಟಡೆ ಕುಂಭಶ್ರಿ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಮತದಾನ

0

ವೇಣೂರು: ನಿಟ್ಟಡೆ ಕುಂಭಶ್ರಿ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ.12ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು.

ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಈವಿಎಂ ಮಷಿನ್ ಆ್ಯಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕರಾದ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ  ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು.

LEAVE A REPLY

Please enter your comment!
Please enter your name here