ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ.15ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ ಪ್ರದರ್ಶಿಸಿದರು.
ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಈ ಕಾರ್ಯಕ್ರಮವು ಎಲ್ಲರಿಗೂ ಅರ್ಥವನ್ನು ಕಲ್ಪಿಸುವ ಕಾರ್ಯಕ್ರಮವಾಗಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಕೋರಿದರು.
ಮಡಂತ್ಯಾರು ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ ಒಸ್ಮಾಂಡ್ ರೋಶನ್ ಡಿಸೋಜ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಬಕ್ರೀದ್ ಹಬ್ಬವು ತ್ಯಾಗದ ಸಂಕೇತವಾಗಿದೆ, ನಾವೆಲ್ಲರೂ ನಮ್ಮ ಹೆತ್ತವರಿಗೆ, ಗುರುಗಳಿಗೆ ವಿಧೇಯತೆಯನ್ನು ತೋರಿಸಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯವನ್ನು ಕೋರಿದರು.
ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅಸ್ನ ರವರು ನಿರೂಪಿಸಿ, ಮುಹೀನುದ್ದೀನ್ ರವರು ಸ್ವಾಗತಿಸಿ, ಆಯಿಷಾ ಸರ ರವರು ಧನ್ಯವಾದವನ್ನು ಸಮರ್ಪಿಸಿದರು.ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.