

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಅಂತಿಮ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಜೂನ್ 14ರಂದು ಏರ್ಪಡಿಸಿದರು.
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯಾ ಕೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಸಂಸ್ಥೆಯ ಸಂಯೋಜಕ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು ಧನತ್ಮಾಕ ಮಾತುಗಳಿಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳಿಂದ ಶುಭಹಾರೈಸಿದರು.
ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ ಉಪಸ್ಥಿತರಿದ್ದರು.
ಪ್ರಥಮ ಬಿ.ಕಾಂ ಸಫಾ ತಸ್ಮಿಯಾ ಸ್ವಾಗತಿಸಿ , ಸಂಚಿತ್.ಕೆ ಎಸ್. ಪ್ರಥಮ ಬಿ.ಕಾಂ ವಂದಿಸಿ, ಸುಪ್ರಿಯಾ , ನಿಶ್ಮಿತಾ , ಸುರಕ್ಷಾ ಸಭಾ ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಿದರು. ಫಾತಿಮಾ ಹಾಗೂ ಸಂಶಾದ್ ಪ್ರಥಮ ಬಿ.ಕಾಂ ಸಮಗ್ರ ಕಾರ್ಯಕ್ರಮ ನಿರ್ವಹಿಸಿದರು. ಬೋಧಕ- ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ವು ಸಂಪನ್ನಗೊಂಡಿತು.