ಇಂದಬೆಟ್ಟು: ಗ್ರಾಮದ ದರ್ಖಾಸು ಮನೆಯ ಲಕ್ಷ್ಮಣ ಗೌಡ ಇವರ ಮಗಳು ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಜೂ15) ಸಂಜೆ ನಡೆದಿದೆ.
ವಿದ್ಯಾರ್ಥಿನಿ ಜಯಲಕ್ಷ್ಮಿಯು ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಇಂದು (ಜೂನ್ 15) ಶಾಲೆಗೆ ಗೈರಾಗಿದ್ದರು ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.