ಮುಂಡಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗೋತ್ಸವ 2024 ಕಾರ್ಯಕ್ರಮವನ್ನು ಜೂ.15ರಂದು ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ವೆನ್ಲಾಕ್ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸೋಹನ್ ಕುಮಾರ್ ಎನ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಆಯುಷ್ ವೈದ್ಯ ಪದ್ಧತಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಉಜಿರೆಯ ಎಸ್.ಡಿ.ಎಂ ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎನ್.ವೈ.ಎಸ್ ವಿದ್ಯಾರ್ಥಿ ವಿಶ್ವಾಸ್ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸುವುದರೊಂದಿಗೆ ಯೋಗಾಸನಗಳ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಮುರಳಿಧರ್ ಶಿಕ್ಷಕ ವರ್ಗದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯವರು ಕಾರ್ಯಕ್ರಮವನ್ನು ಸಂಯೋಜಿಸಿದ್ದರು.