ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಬೆಳ್ತಂಗಡಿ ತಾಲೂಕಿನ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ, ದ್ವೇಷ ರಾಜಕೀಯವನ್ನು ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಜೂ.18ರಂದು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ನಡೆಯಿತು.
ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಶಾಸಕ ಹರೀಶ್ ಪೂಂಜ, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಉಜಿರೆ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಪುದುವೆಟ್ಟು, ಪ್ರಮುಖರಾದ ಗಣೇಶ್ ನಾವೂರು, ಹರಿಕೃಷ್ಣ ಬಂಟ್ವಾಳ, ಪ್ರೀತಂ ಡಿ.ಧರ್ಮಸ್ಥಳ ಸಹಿತ ಪಕ್ಷದ ಪ್ರಮುಖರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರ ಹಾಗೂ ಕಾರ್ಯಕರ್ತಯರು ಉಪಸ್ಥಿತರಿದ್ದರು.
p>