ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿ ಪತ್ರಿಕೆ ಅನಾವರಣ

0

ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಚೈತ್ರೇಶ್ ಇಳಂತಿಲ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ಬಿತ್ತಿ ಪತ್ರಿಕೆ ಅಕ್ಷರವಾಣಿಯನ್ನು ಅನಾವರಣಗೊಳಿಸಿ ಮಾತನಾಡುತ್ತಾ, ಪಠ್ಯ ಚಟುವಟಿಕೆಗಳನ್ನು ಕೇವಲ ಪಠ್ಯವಾಗಿ ಪರಿಗಣಿಸದೆ ಜೀವನ ಮೌಲ್ಯಗಳನ್ನು ರೂಪಿಸಿಕೊಳ್ಳುವಲ್ಲಿ ಬಳಸಿಕೊಳ್ಳಬೇಕು. ಪತ್ರಿಕೆ ಓದುವ ಹವ್ಯಾಸದಿಂದ ಹೆಚ್ಚಿನ ಜ್ಞಾನವನ್ನು ಪಡೆದು ಸೃಜನಶೀಲತೆಯನ್ನು ಗಳಿಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.ಉಪನ್ಯಾಸಕಿ ರಮ್ಯಾ ಜೋಶಿ ಸ್ವಾಗತಿಸಿದರು. ಸೃಜನ್ ವಂದಿಸಿದರು. ಕುಮಾರಿ ಸಾಹಿತ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here