ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

0

ಪುದುವೆಟ್ಟು: ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 14ರಂದು ಪೋಷಕರ ಸಭೆಯನ್ನು ನಡೆಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಿಕ್ಕ ಸಾಹೇಬ್ ರವರು ವಹಿಸಿಕೊಂಡಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಈ ವರ್ಷ ಶಾಲೆಯಲ್ಲಿ ನಡೆಯುವ ಶೈಕ್ಷಣಿಕ ಕಾರ್ಯಕ್ರಮದ ಸುದೀರ್ಘವಾದ ಮಾಹಿತಿಯನ್ನು ನೀಡಿದರು. ನಂತರ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ಪೋಷಕರೊಂದಿಗೆ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚೆ ನಡೆಸಲಾಯಿತು.

ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಿಕ್ಕ ಸಾಹೇಬ್ ರವರು ಮಾತನಾಡಿ ಈ ವರ್ಷದ ಎಲ್ಲಾ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪೋಷಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

LEAVE A REPLY

Please enter your comment!
Please enter your name here