Site icon Suddi Belthangady

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಚುನಾವಣೆ

ಪುದುವೆಟ್ಟು: ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಜೂನ್ 15ರಂದು ನಡೆಸಲಾಯಿತು.

ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿ ಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು. ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಈ ಸಂದರ್ಭದಲ್ಲಿ ಅಭಿನಂದಿಸಿದರು.

Exit mobile version