Site icon Suddi Belthangady

ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

ಧರ್ಮಸ್ಥಳ: ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಿವೃತ್ತರಾದ ಸರಕಾರಿ ಅಧಿಕಾರಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ, ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ.ಜಯಕೀರ್ತಿ ಜೈನ್ ಮತ್ತು ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ರವರನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ. ಕಾರ್ಯದರ್ಶಿ ದಿನೇಶ್.ಎಂ. ಸಿಬ್ಬಂದಿಗಳು ಉಪಸ್ಥಿತರಿದ್ದು ಸನ್ಮಾನಿಸಿದರು.

Exit mobile version