


ಉಜಿರೆ: ಉಜಿರೆ ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮ ಜೂ.15ರಂದು ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಕೆ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಪ್ರತಿಯೊಬ್ಬರಲ್ಲು ವಿಶಿಷ್ಟವಾದ ಪ್ರತಿಭೆ ಅಡಗಿದ್ದು ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿಕೊಳ್ಳಿಯೆಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಸಹಶಿಕ್ಷಕಿ ಜಯಶ್ರೀ ಬಿ.ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.


ಶಾಲೆ ಹೊಸದಾಗಿ ಸೇಪರ್ಡೆಗೊಂಡಿರುವ 8ನೇ ಹಾಗೂ 9ನೇ ತರಗತಿ ವಿದ್ಯಾರ್ಥಿಗಳು ಹಾಡು, ಭಾಷಣ, ಮಿಮಿಕ್ರಿ, ಯಕ್ಷಗಾನ ಪ್ರಹಸನ ಏಕಪಾತ್ರಾಭಿನಯ ಹಾಗೂ ನೃತ್ಯದ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿದರು.
ಶಾಲಾ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ನಿಶಾನ್ಯ ಅತ್ಮಿ ಪ್ರಾರ್ಥಿಸಿ, ಶಿಕ್ಷಕ ಜ್ಞಾನೇಶ್ ಸ್ವಾಗತಿಸಿ, ಸಂಗೀತಾ ವಂದಿಸಿದರು.ತ್ರಿವೇಣಿ ಕಾರ್ಯಕ್ರಮ ನಿರೂಪಿಸಿದರು.









