

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು.
ಕಾಲೇಜ್ ನ ಪ್ರಿನ್ಸಿಪಾಲ್ ಡಾ.ಅಶೋಕ್ ಕುಮಾರ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ ಈ ಕಾರ್ಯಾಗಾರವು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ವಿಶೇಷವಾಗಿ ರೂಪುಗೊಂಡಿದೆ.
ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಇಂದಿನ ಡಿಜಿಟಲ್ ಯುಗಕ್ಕೆ ಹೊಂದಿಕೊಂಡಂತೆ ಗ್ರಂಥಾಲಯಗಳು ಆಧುನೀಕರಣಗೊಂಡು ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಆಗಬೇಕಾಗಿರುವ ಸುಧಾರಣೆಗಳ ಬಗ್ಗೆ ಚರ್ಚೆ ಹಾಗೂ ಮಾಹಿತಿ ವಿನಿಮಯ ನಡೆಯಲಿರುವುದು ಎಂದು ತಿಳಿಸಿದರು.
ಇಂಜಿನಿಯರಿಂಗ್ ಕಾಲೇಜಿನ ಗ್ರಂಥಪಾಲಕಿ ಡಾ.ರಜತ ಸಂಪನ್ಮೂಲ ವ್ಯಕ್ತಿಯಾಗಿದ್ದರು.