ಧರ್ಮಸ್ಥಳ: ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಮತ್ತು ರೈತರ ಸಭಾ ಭವನದ ಉದ್ಘಾಟನಾ ಸಮಾರಂಭ ಜೂ.21ರಂದು ಸಂಘದ ವಠಾರ, ಕಲ್ಲೇರಿಯಲ್ಲಿ ನಡೆಯಿತು.
ನೂತನ ಕಟ್ಟಡವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.ರೈತ ಸಭಾ ಭವನ ಹಾಗೂ ಉಪಹಾರ ಭವನವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಪ್ರೀತಮ್ ಡಿ. ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಪ್ರತಾಪಸಿಂಹ ನಾಯಕ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ. ವಿ.ಪ್ರತೀಮಾ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್, ಉಪಾಧ್ಯಕ್ಷರು, ಭಾಗವಹಿಸಿದ್ದರು .
ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ, ನಿರ್ದೇಶಕರುಗಳಾದ ಶಾಂಭವಿ ರೈ, ನೀಲಾಧರ ಶೆಟ್ಟಿ, ಶೀನ, ಚಂದ್ರಶೇಖರ್, ಉಮಾನಾಥ, ಪ್ರಭಾಕರ ಗೌಡ, ವಿಕ್ರಮ್, ಧನಲಕ್ಷ್ಮೀ, ಪ್ರಸನ್ನ ಹೆಬ್ಬಾರ್, ತಂಗಚ್ಚನ್ ಎನ್. ಪಿ., ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಸಹಕಾರ ಸಂಘಗಳ ಅಧ್ಯಕ್ಷರುಗಳು, ಸಂಘದ ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು, ಸಹಕಾರಿಗಳು ಹಾಜರಿದ್ದರು.ಕಟ್ಟಡ ಸಮಿತಿಯ ಸದಸ್ಯ ಶ್ರೀನಿವಾಸ ರಾವ್ ಸ್ವಾಗತಿಸಿ, ಎ.ಎಸ್. ಲೋಕೇಶ್ ಶೆಟ್ಟಿ ಮತ್ತು ಮಹಾವೀರಜೈನ್ ನಿರೂಪಿಸಿದರು.