ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಯಪಡಿಸಲಾಯಿತು.ಕಾಲೇಜು ವಿಭಾಗದಲ್ಲಿ ಸಂಸ್ಥೆಯ ಹಳೆ ವಿದ್ಯಾರ್ಥಿ ಮಧುಶ್ರೀ ಇವರು ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಮಾಡಿಸಿ ಯೋಗಾಸನಗಳ ತರಬೇತಿಯನ್ನು ನೀಡಿದರು.
ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ಹರಿಣಾಕ್ಷಿ ಯೋಗಾಭ್ಯಾಸವನ್ನು ಮಾಡಿಸಿ ಯೋಗಾಸನದ ತರಬೇತಿಯನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯ ಹಾಗೂ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.