ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕ ವಂದನೀಯ ಫಾದರ್ ಎಲಿಯಾಸ್ ಡಿ’ಸೋಜ ಯೋಗದ ಮಹತ್ವ ತಿಳಿಸಿದರು.
ಮುಖ್ಯ ಶಿಕ್ಷಕ ನೋಬಾರ್ಟ್ ವಿನ್ಸೆಂಟ್ ಪೌಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ರವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಯೋಗಾಸನವನ್ನು ಮಾಡಿದರು.
p>