ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಡಾ.ಯು.ಸಿ ಪೌಲೋಸ್ ಮತ್ತು ಟ್ರಸ್ಟೀ ಸದಸ್ಯೆ ಮೇರಿ ಯು.ಪಿ ನೇತೃತ್ವದಲ್ಲಿ ಜೂನ್ 21ರಂದು ಯೋಗಾಸನ ಮಾಡಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು.
ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ಯೋಗ ದಿನಾಚರಣೆಯ ಮಹತ್ವ ಹಾಗೂ ಪ್ರಾರಂಭವಾದ ಬಗ್ಗೆ ವಿವರಿಸಿದರು.ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಮತ್ತು ಆಶ್ರಮ ನಿವಾಸಿಗಳು ಭಾಗವಹಿಸಿದರು.