

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಜೂನ್ 21ರಂದು “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿದ್ಯಾಲಯದ ವಿದ್ಯಾರ್ಥಿಗಳಾದ ಸಂಗೀತ ಮತ್ತು ವಿದ್ಯಾಶ್ರೀ ಇವರು ವಿದ್ಯಾರ್ಥಿಗಳಿಗೆ ವಿಶೇಷ ಯೋಗ ತರಬೇತಿಯನ್ನು ನೀಡಿ, ಯೋಗ ದಿನಾಚರಣೆಯಂದು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರು ದೀಪ ಪ್ರಜ್ವಲನ ಮೂಲಕ ಉದ್ಘಾಟಿಸಿ ಶುಭವನ್ನು ಕೋರಿದರು. ಈ ಕಾರ್ಯಕ್ರಮದಲ್ಲಿ ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.