ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

0

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21ರಂದು ಆಚರಿಸಲಾಯಿತು. ಶಾಲೆಯ ಪೂರ್ವ ವಿದ್ಯಾರ್ಥಿ ಮತ್ತು ಊರಿನವರೇ ಆದ ಸುದೀಶ್ ಇವರು ಯೋಗದ ಕುರಿತಾಗಿ ಮಾಹಿತಿ ನೀಡುತ್ತಾ ಕೆಲವು ಯೋಗಾಭ್ಯಾಸಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿದರು.

ಶಿಕ್ಷಕಿ ಶೋಲಿಯವರು ಕೆಲವು ಆಸನಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಇಂದು ಅತೀ ದೊಡ್ಡ ಹಗಲು ಇರುವ ವಿಶೇಷ ದಿನವಾಗಿದ್ದು ಈ ವರ್ಷದ ಯೋಗ ಥೀಮ್ ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ ಆಗಿದೆ. ಅಂದರೆ ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೆ ಸಾಮಾಜಿಕ ಕ್ಷೇಮಕ್ಕೂ ಕೊಡುಗೆ ನೀಡುತ್ತದೆ ಎಂದು ಶಿಕ್ಷಕ ಶರತ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here