ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ವಿದ್ಯಾರ್ಥಿನಿ ಅಲ್ರಿಯಾ ಡಿಸೋಜ ವಿಶ್ವ ಯೋಗ ದಿನಾಚರಣೆಯ ಮಹತ್ವ ಹಾಗೂ ಯೋಗದ ಪ್ರಯೋಜನಗಳನ್ನು ತಿಳಿಸಿದರು.
ಲಘು ವ್ಯಾಯಾಮ, ಪ್ರಾಣಾಯಾಮ, ಸೂರ್ಯ ನಮಸ್ಕಾರದ ಜೊತೆಗೆ ಹಲವು ಆಸನಗಳನ್ನು ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು.ಶಾಲಾ ಮುಖ್ಯೋಪಾಧ್ಯಾಯ ವಂ.ಫಾ.ಕ್ಲಿಫರ್ಡ್ ಪಿಂಟೋರವರು ನಿರಂತರವಾಗಿ ಪ್ರಾಣಾಯಾಮ, ಧ್ಯಾನ ಮತ್ತು ಯೋಗ ಅಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸಧೃಡರಾಗಿರಬಹುದೆಂದು ತಿಳಿಸಿದರು.
ಸಹಶಿಕ್ಷಕಿ ಪ್ರೀತಾ ಡಿ’ಸೋಜ ಕಾರ್ಯಕ್ರಮ ನಿರ್ವಹಿಸಿದರು.
p>