ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.21ರಂದು ಯೋಗ ದಿನಾಚರಣೆ ನಡೆಯಿತು.
ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಉಪಮುಖ್ಯಮಂತ್ರಿ ಕು.ಸಾನ್ವಿ ಶೆಟ್ಟಿ ಇವರು ವಿದ್ಯಾರ್ಥಿಗಳ ಜೀವನದಲ್ಲಿ ಯೋಗಾಭ್ಯಾಸದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜಾರ್ಜ್ ಇವರ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಅಜಿತ್ ಕುಮಾರ್ ಮತ್ತು ಸುದರ್ಶನ್ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಮಾಡಿಸುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು.