ವೇಣೂರು: ಶ್ರೀ ಧ.ಮಂ ಐಟಿಐಯಲ್ಲಿ 119 ಯುನಿಟ್ ರಕ್ತದಾನ

0

ವೇಣೂರು: ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟೀಯ ಸೇವಾ ಯೋಜನೆ ಘಟಕದ ವತಿಯಿಂದ, ಹಳೆವಿದ್ಯಾರ್ಥಿ ಸಂಘ, ಪದ್ಮಾಂಬ ಸಮೂಹ ಸಂಸ್ಥೆಗಳು, ವೇಣೂರು, ಹಾಲು ಉತ್ಪಾದಕರ ಸಹಕಾರಿ ಸಂಘ, ಕುಕ್ಕೇಡಿ. ಕುಕ್ಕೇಡಿ ಗ್ರಾಮ ಪಂಚಾಯತ್, ಲಯನ್ಸ್ ಕ್ಲಬ್ ವೇಣೂರು, ಲಯನ್ಸ್ ಕ್ಲಬ್ ಮಂಗಳೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು, ಪಲ್ಗುಣಿ ಸೇವಾ ಸಂಘ ವೇಣೂರು, ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್, ದ.ಕ. ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯ, ಮಂಜುಶ್ರೀ ಭಜನಾ ಮಂಡಳಿ, ಕುಂಡದಬೆಟ್ಟು, ಜನಸೇವಾ ಟ್ರಸ್ಟ್ ಪಡ್ಡಂದಡ್ಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಕ್ಕೇಡಿ, ನಿಟ್ಟಡೆ ಇವರ ಸಹಭಾಗಿತ್ವದಲ್ಲಿ ರಕ್ತದಾನದ ಬೃಹತ್ ಶಿಬಿರ ವೇಣೂರು ಐಟಿಐಯಲ್ಲಿ ನಡೆಯಿತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು ಇದರ ಅಧ್ಯಕ್ಷರಾದ ಲ.ಸುಂದರ ಹೆಗ್ಡೆ, ಬಿ.ಇ. ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ. ರಕ್ತದಾನ ಅತ್ಯಂತ ಶ್ರೇಷ್ಠ ದಾನ ಇದರಿಂದ ಹಲವಾರು ಜೀವ ಉಳಿಸಿದಂತಹ ಪುಣ್ಯ ಪ್ರಾಪ್ತಿಯಾಗುತ್ತದೆ, ಇಂತಹ ಕಾರ್ಯಕ್ರಮಗಳಿಂದ ಯುವಜನತೆ ದಾನದಗುಣವನ್ನು ಮೈಗೂಡಿಸಿ ಕೊಳ್ಳಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ 258 ರಕ್ತದಾನ ಶಿಬಿರವನ್ನು ಸಂಯೋಜಿಸಿರುವ ಲ| ಎನ್. ಜೆ. ನಾಗೇಶ್ ಎಂ.ಜೆ.ಎಫ್., ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಲ| ಜಯರಾಜ್ ಪ್ರಕಾಶ್, ಸಂಸ್ಥೆಯ ಹಳೆ ವಿದ್ಯಾರ್ಥಿ ಗಬ್ಬರ್ ಸಿಂಗ್ ಚಲನಚಿತ್ರದ ನಾಯಕ ನಟ ಶರಣು ಶೆಟ್ಟಿ, ಜೀವವಿಮಾ ಪ್ರತಿನಿಧಿ ಜಗನ್ನಾಥ ದೇವಾಡಿಗ, ಸಂಸ್ಥೆಯ ಹಳೆ ವಿದ್ಯಾರ್ಥಿ ಮುಖ್ಯ ಜೀವವಿಮಾ ಸಲಹೆಗಾರರಾದ ಶ್ರೀಕಾಂತ್ ಕಾಮತ್ ಇವರುಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮಾರಂಭದ ಅದ್ಯಕ್ಷತೆಯನ್ನು ವಹಿಸಿದ್ದ ಐಟಿಐ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಮಾತನಾಡಿ ವಿದ್ಯಾರ್ಥಿ ದಿಸೆಯಿಂದಲೇ ದಾನದ ಮಹತ್ವವನ್ನು ಅರಿತು ರಕ್ತದಾನದಂತಹ ಶ್ರೇಷ್ಠ ಸಮಾಜ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು.ಮಂಗಳೂರಿನ ಕೆ.ಎಂ.ಸಿ.ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಸುನಿಧಿ ಶೃತಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿತಾ ಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದ್ಮಾಂಬ ಸಮೂಹ ಸಂಸ್ಥೆಗಳ ಮಾಲಕರು ಜಿನರಾಜ್ ಜೈನ್, ಪಲ್ಗುಣಿ ಸೇವಾ ಸಂಘದ ಶ್ರೀಕಾಂತ ಉಡುಪ, ಲಯನ್ಸ್ ಕ್ಲಬ್ ಕಾರ್ಯದರ್ಶಿ ದಯಾನಂದ ಭಂಡಾರಿ, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನಿರ್ಮಲ್‌ಕುಮಾರ್ ಬೊಳ್ಜಾಲ್ ಗುತ್ತು, ಮಂಜುಶ್ರೀ ಭಜನಾ ಮಂಡಳಿ, ಕುಂಡದಬೆಟ್ಟು, ಇದರ ಅಧ್ಯಕ್ಷರಾದ ರವಿ ಕುಮಾರ್ ಕೆ.ಯೈ., ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಗಣೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು ಇಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ಲಯನ್ಸ್ ಕ್ಲಬ್ ಮಂಗಳೂರು ಇದರ ಕಾರ್ಯದರ್ಶಿ ಶಶಿಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 119 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ವಿದ್ಯಾರ್ಥಿ ವಿನೀತ್ ಪ್ರಾರ್ಥಿಸಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪದ್ಮಪ್ರಸಾದ್ ಬಸ್ತಿ ಸ್ವಾಗತಿಸಿ, ದಯಾನಂದ ಭಂಡಾರಿ ವಂದಿಸಿದ ಈ ಕಾರ್ಯಕ್ರಮವನ್ನು ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಸತೀಶ್ ನಿರ್ವಹಿಸಿದರು.

p>

LEAVE A REPLY

Please enter your comment!
Please enter your name here