

ಮುಂಡಾಜೆ: ಪದವಿಪೂರ್ವ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕದ ಸಂಭ್ರಮಾಚರಣೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ತಾಲೂಕು ಸಂಪರ್ಕ ಪ್ರಮುಖ್ ಶಿವಪ್ರಸಾದ ಸುರಿಯ ಇವರು ವಿದ್ಯಾರ್ಥಿಗಳಿಗೆ ಶಿವಾಜಿ ಮಹಾರಾಜರ ಸಾಧನೆಗಳ ಅವರ ಪರಾಕ್ರಮಗಳ ಬಗ್ಗೆ ಹಾಗೂ ಅವರು ಸ್ವರಾಜ್ಯಕೊಸ್ಕರ ಹೋರಾಟ ಮಾಡಿದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ವಿನಯ ಚಂದ್ರ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ.ಎ ಇವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಕನ್ನಡ ಉಪನ್ಯಾಸಕಿ ವಸಂತಿ ವೆಂಕಟೇಶ್ ಸ್ವಾಗತಿಸಿ, ವಿದ್ಯಾರ್ಥಿ ಧನುಷ್ ಕೆ ಎನ್ ಧನ್ಯವಾದಗೈದರು.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.