Site icon Suddi Belthangady

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಂಜೊಟ್ಟಿ: ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್, ಕಾರ್ಯದರ್ಶಿ ಸಯ್ಯದ್ ಅಯ್ಯುಬ್, ಸಯ್ಯದ್ ಇರ್ಫಾನ್ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯದ್ ಹಬೀಬ್ ಇವರು ಮಾತನಾಡಿ ” ಜೀವನದಲ್ಲಿ ಅಲ್ಪಸಮಯವನ್ನಾದರೂ ಯೋಗಕ್ಕೆ ಮೀಸಲಿಟ್ಟು ನಮ್ಮ ಜೀವನವನ್ನು ಸಾರ್ಥಕಗೊಳಿಸಬೇಕು” ಎಂದು ಹೇಳಿ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ತನ್ನ ಪ್ರಾಸ್ತಾವಿಕ ಮಾತುಗಳೊಂದಿಗೆ ಶಾಲಾ ಮುಖ್ಯೋಪಾಧ್ಯಾಯನಿ ಜಾಕಿನ್ ಬಿನ್ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿಕೊಟ್ಟರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನಡೆದ ವಿವಿಧ ಯೋಗಾಸನಗಳ ಪ್ರದರ್ಶನ ಮೆಚ್ಚುಗೆಗೆ ಕಾರಣವಾಯಿತು.

ಶಾಲಾ ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಆಯಿಷತ್ ರಫಾ ಅತಿಥಿಗಳನ್ನು ಸ್ವಾಗತಿಸಿ, ಫಾತಿಮತ್ ರಾಫಿಯ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿನಿ ಹುಸ್ನ ಬೇಗಮ್ ಧನ್ಯವಾದಗೈದರು.

Exit mobile version