Site icon Suddi Belthangady

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ- ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪ್ರಥಮ ಪದವಿ ಪೂರ್ವ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಜೂನ್ 21ರಂದು ಏರ್ಪಡಿಸಲಾಯಿತು. ಇದರೊಂದಿಗೆ ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವಿಂದ್ಯಾಶ್ರೀ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸೌಮ್ಯ .ಎನ್ ಮಾತನಾಡಿ ‘ನಾವು ಕಲಿಯಬೇಕಾಗಿರುವುದು ಸಾಮಾನ್ಯವಾದ ಯಶಸ್ಸಿನಿಂದಲ್ಲ, ಅಸಾಮಾನ್ಯವಾದ ಸೋಲುಗಳಿಂದ” ಎಂಬ ಸಕರಾತ್ಮಕ ಮಾತುಗಳಿಂದ ಬಡಿದೆಚ್ಚರಿಸಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿ ಸಂಘದ ಜವಾಬ್ದಾರಿಯೊಂದಿಗೆ ವಿದ್ಯಾರ್ಥಿಯು ಪರಿಪೂರ್ಣತೆಯನ್ನು ಸಾಧಿಸಬೇಕಾದರೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯು ತಮ್ಮನ್ನು ತೊಡಗಿಸಿಕೊಳ್ಳಬೇಕು, ಆಗ ಮಾತ್ರ ಯಶಸ್ಸುಗಳಿಸಬಹುದು ಎಂದರು. ಸಂಸ್ಥೆಯ ಸಂಯೋಜಕ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದರು

Exit mobile version