ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ.ಶ್ಯಾಮಪ್ರಸಾದ್‌ ಮುಖರ್ಜಿ ಅವರ ಪುಣ್ಯಸ್ಮರಣೆ- ಸಸಿ ನೆಡುವ ಕಾರ್ಯಕ್ರಮ

0

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ
ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ, ಭಾರತೀಯ ಜನಸಂಘದ ಸ್ಥಾಪಕ ಡಾ.ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನವನ್ನು ಜೂನ್ 23ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕರು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಮೌಲ್ಯಗಳನ್ನು ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅವರು ಪಕ್ಷಕ್ಕೆ ಕೊಟ್ಟ ಕೊಡುಗೆಯನ್ನು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮoಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಆಶಾ ಸಲ್ದಾನ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಉಪಸ್ಥಿತರಿದ್ದರು.

ನಗರದ 105 ಬೂತ್ ಅಧ್ಯಕ್ಷ ಅಕ್ಷಯ್ ರಾವ್ ರವರ ಮನೆಯಲ್ಲಿ ಸಸಿ ನೆಡಲಾಯಿತು.

LEAVE A REPLY

Please enter your comment!
Please enter your name here