

ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ಜೂ.24ರಂದು ದೇವರ ದರ್ಶನ ಪಡೆದರು.
ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಜಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಳದ ಮ್ಯಾನೇಜರ್ ಪಾರ್ಶ್ವನಾಥ್ ಜೈನ್, ಧರ್ಮಸ್ಥಳದ ಪಿ.ಎಸ್ ಕೃಷ್ಣ ಸಿಂಗ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಧರ್ಮಸ್ಥಳದ ಬಳಿಕ ಬಿ.ಎಸ್.ಯಡಿಯೂರಪ್ಪ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ, ಹಲವು ವರ್ಷಗಳ ಬಳಿಕ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶಿರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯಲ್ಲಿ ಬರಗಾಲವಿದೆ. ಹಾಗಾಗಿ ಸಕಾಲದಲ್ಲಿ ಮಳೆ-ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಬರುವ ದಿನಗಳು ಒಳ್ಳೆಯ ದಿನಗಳಾಗುತ್ತೆ ಎಂಬ ಭಾವನೆ ನನಗಿದೆ ಎಂದು ಹೇಳಿದರು.