

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಜೂನ್ 23ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಂಗಣದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್,ಲಯನ್ಸ್ ಜಿಲ್ಲಾ ಗವರ್ನರ್ ಡಾ. ಮೇಲ್ವಿನ್ ಡಿ’ಸೋಜ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವಾರೋ, ನಿಕಟ ಪೂರ್ವ ಅಧ್ಯಕ್ಷ ದೇವದಾಸ ಶೆಟ್ಟಿ, ಪೂರ್ವ ಅಧ್ಯಕ್ಷ ಡಾ.ದೇವಿಪ್ರಸಾದ್ ಬೊಲ್ಮ, ಜಿಲ್ಲಾ ಕ್ಯಾಬಿನೆಟ್ ಅಧ್ಯಕ್ಷ ಸುಧಾಕರ ಶೆಟ್ಟಿ, ಕಾರ್ಯದರ್ಶಿ ಒಸ್ವಾಲ್ಡ್ ಡಿ’ಸೋಜ, ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಸವಿತಾ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕ್ಲಬ್ ನ ಸ್ಥಾಪಕ ಸದಸ್ಯರಾದ ಎಂ.ಜಿ.ಶೆಟ್ಟಿ, ವಿ.ಆರ್.ನಾಯಕ್, ಸಾಧಕಾರದ ಕೆ.ಮೋಹನ್ ಕುಮಾರ್, ಡಾ.ಗೋಪಾಲಕೃಷ್ಣ ಕಾಂಚೋಡು, ಡಾ.ಕೆ.ಜಿ.ಪಣಿಕ್ಕರ್, ನಿವೃತ್ತ ಸೈನಿಕ ಗಣೇಶ್, ಇವರನ್ನು ಹಾಗೂ ಕ್ಲಬ್ ನ್ನು 50 ವರ್ಷಗಳಲ್ಲಿ ಮುನ್ನಡೆಸಿದ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು. ಕಟ್ಟಡ ಸಮಿತಿಯ ರಾಜು ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ನಿತ್ಯಾನಂದ ನಾವರ ಸ್ವಾಗತಿಸಿ, ಪ್ರಕಾಶ್ ಶೆಟ್ಟಿ ನೊಚ್ಚ ನಿರೂಪಿಸಿದರು.
ಸುವರ್ಣ ಮಹೋತ್ಸವ ಪ್ರಯುಕ್ತ ಸಂಜೆ ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಳ್ಳುವ ಕಾರ್ಯಕ್ರಮ, ಚಿನ್ನರ ಚಿಲಿಪಿಲಿ, ಹಾಡಿನ ಝೇಂಕಾರ, ಸುವರ್ಣ ಮಹೋತ್ಸವ ಭವ್ಯ ಮೆರವಣಿಗೆ ನಡೆಯಿತು.ಸಭಾ ಕಾರ್ಯಕ್ರಮದ ಬಳಿಕ ಪುದರ್ ದೀದಾಂಡ್ ನಾಟಕ ಪ್ರದರ್ಶನಗೊಂಡಿತು.