ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೂ.24ರಂದು(ಇಂದು) ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, ಸಿಎ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ಭಟ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯಿತಿನ ಸದಸ್ಯರು, ಕೊಕ್ಕಡ ಬೂತ್ ಸಮಿತಿಯ ಪದಾಧಿಕಾರಿಗಳು ಜೊತೆಯಲ್ಲಿದ್ದರು.
ಧರ್ಮಸ್ಥಳದ ಬಳಿಕ ಬಿ.ಎಸ್.ಯಡಿಯೂರಪ್ಪ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ, ಹಲವು ವರ್ಷಗಳ ಬಳಿಕ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶಿರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯಲ್ಲಿ ಬರಗಾಲವಿದೆ. ಹಾಗಾಗಿ ಸಕಾಲದಲ್ಲಿ ಮಳೆ-ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಬರುವ ದಿನಗಳು ಒಳ್ಳೆಯ ದಿನಗಳಾಗುತ್ತೆ ಎಂಬ ಭಾವನೆ ನನಗಿದೆ ಎಂದು ಹೇಳಿದರು.