Site icon Suddi Belthangady

ಇಂದಬೆಟ್ಟು: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ 5KW ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಹಸ್ತಾಂತರ

ಇಂದಬೆಟ್ಟು: ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ಇದರ ವತಿಯಿಂದ 5KW ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಹಸ್ತಾಂತರ ಕಾರ್ಯಕ್ರಮ ಜೂನ್ 24ರಂದು ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿನಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ರವರು ವಹಿಸಿದ್ದರು.ಸೆಲ್ಕೋ ಇಂಡಿಯಾ ಡಿಜಿಎಂ ಗುರುಪ್ರಕಾಶ್ ಶೆಟ್ಟಿ, ತಾಲೂಕು (ಪ್ರಭಾರ)ಆರೋಗ್ಯಾಧಿಕಾರಿ ಡಾ|ಸಂಜಾತ್‌, ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್‌ ಜೈನ್, ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಆನಂದ ಅಡೀಲು , ಬಂಗಾಡಿ ಸಿಎ ಬ್ಯಾಂಕ್‌ ಅಧ್ಯಕ್ಷ ಹರೀಶ್‌ ಸಾಲಿಯಾನ್, ಇಂದಬೆಟ್ಟು, ನಾವೂರು, ಮಲವಂತಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಚಾಯತ್ ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಇಂದಬೆಟ್ಟು ಗ್ರಾಮದ ಸಾರ್ವಜನಿಕರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಸೆಲ್ಖೊ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version