Site icon Suddi Belthangady

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಗಾರ

ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಜೂ.24ರಂದು ಏರ್ಪಡಿಸಲಾಗಿತ್ತು. ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅಕ್ಷತಾ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಬಹಳ ದೊಡ್ಡದು ಎಂದು ತಿಳಿಸುತ್ತಾ ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಪೋಷಕರು ಯಾವ ರೀತಿ ಮನೆಯಲ್ಲಿ ವಾತಾವರಣವನ್ನು ನಿರ್ಮಿಸಬೇಕು. ಎಂಬುದನ್ನು ಉದಾರಣೆಗಳ ಮೂಲಕ ಬಹಳ ಚೆನ್ನಾಗಿ ಪೋಷಕರಿಗೆ ಮಾಹಿತಿಯನ್ನು ನೀಡಿದರು.

ಪ್ರೌಢ ಹಂತದಲ್ಲಿ ಮಕ್ಕಳಲ್ಲಿ ದೈಹಿಕವಾಗಿ ಮಾನಸಿಕವಾಗಿ ಬದಲಾವಣೆಯಾಗುತ್ತದೆ ಇದನ್ನು ಪೋಷಕರು ಅರ್ಥೈಸಿಕೊಂಡು ಮಕ್ಕಳೊಂದಿಗೆ ಪೋಷಕರಾಗಿ ಮಾತ್ರವಲ್ಲ ಸ್ನೇಹಿತರಾಗಿ ಇರಬೇಕೆಂದು ಕಿವಿಮಾತು ಹೇಳಿದರು. ಸುಮಾರು 60 ಜನ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತ ಇವರು ಅಧ್ಯಕ್ಷತೆ ವಹಿಸಿ, ಶಿಕ್ಷಕಿ ಶೋಲಿಯವರು ಕಾರ್ಯಕ್ರಮ ನಿರ್ವಹಿಸಿದರು.

Exit mobile version