ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ, ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಸಹಯೋಗದಲ್ಲಿ ಜೂ.27ರಂದು ಉಜಿರೆಯ ಶ್ರೀ ಶಾರದ ಮಂಟಪದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ವಿದ್ಯಾಸಂಸ್ಥೆಗಳು ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಅಪರಾಹ್ನ ಗಂಟೆ 1.00ರವರೆಗೆ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕೇಸರರು ಶರತ್ ಕೃಷ್ಣ ಪಡ್ಡೆಟ್ನಾಯ ಉದ್ಘಾಟಿಸಿ, ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವರು ಕೆ. ಗಂಗಾಧರ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ವೆಸ್ಲಾಕ್ ಜಿಲ್ಲಾ ಆಸ್ಪತ್ರೆ ಕಿವಿ, ಮೂಗು, ಗಂಟಲು ಶಸ್ತ್ರ ಚಿಕಿತ್ಸಾ ತಜ್ಞರು ಡಾ|ವಿಶ್ವ ವಿಜೇತ ಎಸ್.ಕೆ., ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಅಧ್ಯಕ್ಷ ರಂಜನ್ ಜಿ.ಗೌಡ, ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಇಚ್ಚಿಲ, ಒಕ್ಕಲಿಗರ ಸೇವಾ ಸಂಘ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಒಕ್ಕಲಿಗರ ಸೇವಾ ಸಂಘ ಸದಸ್ಯೆ ಸೌಮ್ಯಲತಾ ಜಯಂತ ಗೌಡ ಗುರಿಪಳ್ಳ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ಸಂಘ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಸಂಘ ಅಧ್ಯಕ್ಷೆ ಅಪರ್ಣಾ ಶಿವಕಾಂತ ಗೌಡ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ, ಮಂಗಳೂರು ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮೆಡಿಕಲ್ ಆಫಿಸರ್ ಡಾ|ಸುನಿಧಿ ಭಾಗವಹಿಸಿದರು.

ಪ್ರಕಾಶ್ ಗೌಡ ಕೆದಿಲ ಸ್ವಾಗತಿಸಿ, ಗೀತಾ ಗೌಡ ಬಡಕೊಟ್ಟು ವಂದಿಸಿದರು, ಕಾರ್ಯಕ್ರಮವನ್ನು ನಿತಿನ್ ಗೌಡ ಸುರುಳಿ ಇವರು ನಿರೂಪಿಸಿದರು.

LEAVE A REPLY

Please enter your comment!
Please enter your name here