Site icon Suddi Belthangady

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ವಿರೋಧಿ ದಿನಾಚರಣೆ

ಬೆಳ್ತಂಗಡಿ :ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಜೂ.26ರಂದು ಮಾದಕ ದ್ರವ್ಯಗಳ ದಿನಾಚರಣೆಯನ್ನು ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮುರಳಿಧರ್ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ವಹಿಸಿದ್ದರು.ಪದವಿ ಪ್ರಾಂಶುಪಾಲ ಡಾ.ಸವಿತಾ ಉಪಸ್ಥಿತರಿದ್ದರು.

ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ.ಶಮಿವುಲ್ಲಾ ಸ್ವಾಗತಿಸಿದರು. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಶಿವರಾಜ್, ನಾಗರಾಜ್ ಉಪಸಿತರಿದ್ದರು.

ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಕು.ಸೌಜನ್ಯ ವಂದಿಸಿದರು.

Exit mobile version