Site icon Suddi Belthangady

ಕುಕ್ಕೇಡಿ: ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಜೂ.26ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಅರೋಗ್ಯ ಇಲಾಖೆಯವರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಫಲಾನುಭವಿಗಳು ಪ್ರಯೋಜನ ಪಡೆದುಕೊಂಡರು.

Exit mobile version