ಬೆಳ್ತಂಗಡಿ ತಾಲೂಕು ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಜೂ.27ರಂದು ಸಂಗಮ ಸಭಾಭವನ ಲಾಯಿಲದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಪೃಥ್ವಿ ಸಾನಿಕಂ, ಅಧ್ಯಕ್ಷತೆಯನ್ನು ವಹಿಸಿಕೊಂಡರು.

ಬೆಳ್ತಂಗಡಿ ತಾಲೂಕು ಉಜಿರೆ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೆ.ಬಾಲಕೃಷ್ಣ ಗೌಡ ಉದ್ಘಾಟನೆಯನ್ನು ನೇರವೇರಿಸಿದರು.

ವಿಶೇಷ ಆಹ್ವಾನಿತರಾಗಿ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಪಟ್ಟಣ ಪಂಚಾಯಿತ್ ಮುಖ್ಯ ಅಧಿಕಾರಿ ರಾಜೇಶ್, ಪ್ರದಾನ ಭಾಷಣಕಾರರಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಮುಖ್ಯಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ, ಕಂದಾಯ ಇಲಾಖೆಯ ಅಧಿಕಾರಿ ಹೇಮಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here