ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ- ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

0

ಬೆಳ್ತಂಗಡಿ: ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿ ಜೆ ಪಿ (NDA) ಮೋದಿ ನೇತೃತ್ವದ ಸರ್ಕಾರ ಮೌನವಹಿಸಿರುವುದನ್ನು ಖಂಡಿಸಿ ಇಂದು ದೆಹಲಿಯಲ್ಲಿ ಭಾರತೀಯ ಯುವ ಕಾಂಗ್ರೆಸ್ ನಿಂದ ಸಂಸತ್ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದರು.

ಈ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ರವರು, ನೇತೃತ್ವ ವಹಿಸಿದ್ದರು ಕರ್ನಾಟಕದಿಂದಲೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳು ಪದಾಧಿಕಾರಿಗಳು ಭಾಗಿಯಾಗಿದ್ದು ದಕ್ಷಿಣ ಕನ್ನಡ. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಮುಲ್ಕಿ ಬ್ಲಾಕ್ ಅಧ್ಯಕ್ಷ ಅಶೋಕ್ ಪೂಜಾರ್ , ಬೆಳ್ತಂಗಡಿ ಬ್ಲಾಕ್ ಅಧ್ಯಕ್ಷ SK ಹಕೀಮ್ ಕೊಕ್ಕಡ, ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here