Site icon Suddi Belthangady

ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

ಕಾಶಿಪಟ್ಣ: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ, ಬೆಳ್ತಂಗಡಿ ಸ್ನೇಹ ಕ್ಲಿನಿಕ್ ಮತ್ತು ಕಾಶಿಪಟ್ಣ ಸರಕಾರಿ ಪ್ರೌಢಶಾಲೆ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಗಾರವು ಜೂ.19ರಂದು ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ನ ಆಪ್ತ ಸಮಾಲೋಚಕಿ ರಮ್ಯಾ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆಯುತ್ತಾ ಆಪ್ತ ಸಮಾಲೋಚನೆ ನಡೆಸಿದರು. ಶಾಲಾ ಮುಖ್ಯಶಿಕ್ಷಕ ಶಶಿಧರ್ ಕೆ ಅವರು ಸ್ವಾಗತಿಸಿ, ಸೌಮ್ಯ ನಿರೂಪಿಸಿ, ಹರಿಣಾಕ್ಷಿ ಧನ್ಯವಾದವಿತ್ತರು.

ಶಿಕ್ಷಕರಾದ ದೇವುದಾಸ್ ನಾಯಕ್, ಸರಿನ್ ತಾಜ್, ಸುಜಾತ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Exit mobile version