ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ

0

ಬೆಳ್ತಂಗಡಿ: ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶೋನ್ ಬೆನ್ನಿಸ್ (5ನೇ) ಕಿರಿಯ ವಿಭಾಗದಲ್ಲಿ, ಶಾಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಜೂನ್ 27ರಂದು ಬೆಳ್ತಂಗಡಿಯ ಸಂಗಮ ಸಭಾಭವನ ಲಾಯಿಲದಲ್ಲಿ ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿಯ ಆಚರಣಾ ಸಮಿತಿಯು ಆಯೋಜಿಸಿದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here